ಶೃಂಗೇರಿ: ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ವರದಿಯಾಗಿದೆ.

ಮೃತ ವಿದ್ಯಾರ್ಥಿನಿಯನ್ನು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿಯಾದ ದಿಶಾ (22) ಎಂದು ಗುರುತಿಸಲಾಗಿದೆ. ಅವರು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿದ್ದರು.
ಇಂದು (ಡಿ.17) ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದ ವೇಳೆ ದಿಶಾ ಅವರಿಗೆ ಅಚಾನಕ್ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ. ತಕ್ಷಣ ಚಿಕಿತ್ಸೆಗಾಗಿ ಕ್ರಮ ಕೈಗೊಳ್ಳಲಾಯಿತಾದರೂ, ಅಷ್ಟರಲ್ಲಿ ಅವರು ಮೃತಪಟ್ಟಿದ್ದಾಗಿ ಹೇಳಲಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜು ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ.
ಇತ್ತೀಚೆಗೆ ಮಾನವರು ಎಳೆ ವಯಸ್ಸಿನಲ್ಲಿಯೇ ಹೃದಯಾಘಾತದಿಂದ ಸಾಯುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.