ಮಂಗಳೂರು: ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವಿನ ಹೊಡೆದಾಟ ಮತ್ತು ಗಲಾಟೆಯ ಹಿನ್ನೆಲೆಯಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಜೈಲಿನ ಕೊಠಡಿಗಳಿಂದ ನಾಲ್ಕು ಮೊಬೈಲ್ ಫೋನ್‌ಗಳು ಪತ್ತೆಯಾಗಿದ್ದು, ಗಲಾಟೆಗೆ ಸಂಬಂಧಿಸಿದಂತೆ 17 ಜನ ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರಾಗೃಹ ಅಧೀಕ್ಷಕ ಶರಣಬಸಪ್ಪ ಅವರು ಸೋಮವಾರ ಅನಿರೀಕ್ಷಿತ ತಪಾಸಣೆ ನಡೆಸಲು ಹೋದ ಸಂದರ್ಭದಲ್ಲಿ ವಿಚಾರಣಾಧೀನ ಕೈದಿಗಳು ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದರು. ಅದೇ ದಿನ ಸಂಜೆ, ಕೈದಿಗಳು ಎರಡು ವಿಭಾಗಗಳ ಕಬ್ಬಿಣದ ಗೇಟ್‌ಗಳನ್ನು ಅಲ್ಲಾಡಿಸಿ ಮುರಿಯುವ ರೀತಿಯಲ್ಲಿ ಜೋರಾಗಿ ಕೂಗಾಡಿ ಗಲಾಟೆ ಮಾಡಿದ್ದಾರೆಂದು ತಿಳಿದುಬಂದಿದೆ. ಕೂಡಲೇ ಮಂಗಳೂರು ನಗರ ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಠಾಣೆಯ ಅಧಿಕಾರಿ, ಸಿಬ್ಬಂದಿ ಕಾರಾಗಹದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.
ಇದೇ ಸಮಯದಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ 2 ಕೊಠಡಿಗಳಲ್ಲಿ ಗಲಾಟೆಗೆ ಸಂಬಂಸಿದಂತೆ ಪರಿಸ್ಥಿತಿ ನಿಯಂತ್ರಣಗೊಂಡ ಅನಂತರ ಸಿ.ಸಿ.ಟಿ.ವಿ ದಶ್ಯಾವಳಿಗಳನ್ನು ಪರಿಶೀಲಿಸಿದಾಗ ಗಲಾಟೆಯಲ್ಲಿ ‘ಎ’ ವಿಭಾಗದ ಮೊಯಿದ್ದಿನ್ ಫರಾದ್, ಸರ್ಫರಾಜ್, ಮೊಹಮ್ಮದ್ ಅಲ್ತಾಫ್, ಇಮ್ತಿಯಾಜ್, ಅಬ್ದುಲ್ ನೌಜೀದ್, ಮೊಹಮ್ಮದ್ ಸಾಯಿಲ್ ಅಕ್ರಂ ಮತ್ತು ಮಹಮ್ಮದ್ ಹನೀಫ್ ಹಾಗೂ ‘ಬಿ’ ವಿಭಾಗದ ಲತೇಶ್ ಜೋಗಿ , ಮಂಜುನಾಥ , ಮುರುಗನ್, ಸಚಿನ್ ತಲಪಾಡಿ, ತುಷಾರ್ ಅಮೀನ್, ಶಬರೀಶ, ಗುರುರಾಜ ಹಾಗೂ ಸುಮಂತ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಕಂಡು ಬಂದಿದ್ದು, ಅವರ ವಿರುದ್ದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.