ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

ಡಿ.7ರಂದು ಸಹಾಯಕ ಆಯುಕ್ತರ ಗಡಿಪಾರಿ ನೋಟಿಸ್‌ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರು ವಕೀಲರ ಮೂಲಕ ಆಕ್ಷೇಪಣೆ ಸಲ್ಲಿಸಿದ್ದರು. ಈ ಆಕ್ಷೇಪಣೆ ವಿಚಾರಣೆಯ ವೇಳೆ ವಕೀಲರು ಮತ್ತು ಸಹಾಯಕ ಆಯುಕ್ತರ ನಡುವೆ ವಾದ-ವಿವಾದ ನಡೆದಿದ್ದು, ಅಂತಿಮವಾಗಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ ನೀಡಲಾಗಿದೆ.
ಡಿ.18,2025 ರಿಂದ ಡಿ.17, 2026 ರವರೆಗೆ, ಅಂದರೆ ಒಂದು ವರ್ಷದ ಅವಧಿಗೆ ಗಡಿಪಾರಿಗೆ ಆದೇಶ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಇದು ಎರಡನೇ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಆದೇಶ ಜಾರಿಗೊಂಡಿರುವುದಾಗಿದೆ.