ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ನನ್ನ ಭೇಟಿ ಮಾಡಲು ರೇಣುಕಾಸ್ವಾಮಿ ಕೊಲೆ ಪ್ರಕರಣದ ಮತ್ತೋರ್ವ ಕೈದಿ ಪವಿತ್ರಾಗೌಡ ಪ್ರಯತ್ನ ಮಾಡ್ತಿದ್ದಾರೆ ಅನ್ನೋದು ಮೂಲಗಳಿಂದ ತಿಳಿದುಬಂದಿದ್ದು, ಆದರೆ ನಟ ದರ್ಶನ್ ಪವಿತ್ರಾ ಗೌಡ ಅವರ ಪ್ರಯತ್ನಕ್ಕೆ ಎಳ್ಳು ನೀರು ಬಿಟ್ಟಂತೆ ಭೇಟಿಗೆ ನಿರಾಕರಿಸಿದ್ದಾರಂತೆ.

ಕಾರಾಗೃಹ ಇಲಾಖೆ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ದರ್ಶನ್, ಪವಿತ್ರಾ ಗೌಡರನ್ನ ಮಾತನಾಡಿಸಿದ್ರು. ಈ ವೇಳೆ ಸಹ ಕೈದಿಗಳ ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ರು. ಆದರೆ ಈ ವಿಚಾರ ತಿಳಿದ ದರ್ಶನ್, ಯಾವುದೇ ಕಾರಣಕ್ಕೂ ಪವಿತ್ರಾ ಗೌಡ ಭೇಟಿ ಮಾಡಲ್ಲ ಎಂದಿದ್ದಾರಂತೆ.