ಡಿ.19-ಡಿ.22: ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ “5ನೇ ರಾಷ್ಟ್ರೀಯ ಫಿನ್‌ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್–2025” ಈಜು ಸ್ಪರ್ಧೆ

ಮಂಗಳೂರು : ಅಂಡರ್‌ವಾಟರ್ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ (USFI) ವತಿಯಿಂದ 5ನೇ ರಾಷ್ಟ್ರೀಯ ಫಿನ್‌ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್–2025 ಈಜು ಸ್ಪರ್ಧೆಯು ಇಂದಿನಿಂದ ಡಿ.22ರ ತನಕ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಆಯೋಜಿಸಲಾಗಿದೆ ಎಂದು ಅಂಡರ್ ವಾಟರ್ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ ಸೆಕ್ರೆಟರಿ ಜನರಲ್ ಡಾ. ತಪನ್ ಕುಮಾರ್ ಪಾಣಿಗ್ರಾಹಿ ತಿಳಿಸಿದ್ದಾರೆ.

ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ (ಭಾರತ ಸರ್ಕಾರ)ದಿಂದ ಮಾನ್ಯತೆ ಪಡೆದಿರುವ ಫಿಸಿಕಲ್ ಎಜುಕೇಶನ್ ಫೌಂಡೇಶನ್ ಆಫ್ ಇಂಡಿಯಾ ಹಾಗೂ ಕರ್ನಾಟಕ ಫಿನ್‌ಸ್ವಿಮ್ಮಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ಈ ಮಹತ್ವದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ನಡೆಯಲಿದ್ದು, ಈ ಸ್ಪರ್ಧೆಗೆ ದೇಶದಾದ್ಯಂತ 30 ರಾಜ್ಯಗಳ 400ಕ್ಕೂ ಹೆಚ್ಚು ಜಿಲ್ಲೆಗಳ 1400ಕ್ಕೂ ಹೆಚ್ಚು ಕ್ರೀಡಾಪಟುಗಳು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ. ಈ ನಾಲ್ಕು ದಿನಗಳ ಕ್ರೀಡಾಕೂಟದಲ್ಲಿ ಎಲ್ಲಾ ವಯೋಮಾನದ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ 144 ಸ್ಪರ್ಧೆಗಳು ನಡೆಯಲಿದ್ದು, ಒಟ್ಟು 458 ಪದಕಗಳಿಗಾಗಿ ಪೈಪೋಟಿ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಂಡರ್ ವಾಟರ್ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾದ ಖಜಾಂಚಿಯಾದ ಅಚಿಂತ ಕುಮಾರ್ ಪಂಡಿತ್ , ಸದಸ್ಯರಾದ ರಾಮರಾಜಿ , ರಿಹಾನ್ , ಬಿ ಪಿ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

error: Content is protected !!