ಟೂರಿಸ್ಟ್ ಬಸ್ ಪಲ್ಟಿ: ಹಲವರಿಗೆ ಗಾಯ

ಚಿಕ್ಕಮಗಳೂರು: ಬೆಂಗಳೂರಿನಿಂದ ಕುದುರೆಮುಖ ಟ್ರೆಕ್ಕಿಂಗ್ ತೆರಳುತ್ತಿದ್ದ ಬಸ್ ಕಳಸ ಸಮೀಪದ ಕಚಗಾನೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಇಂದು(ಡಿ.20) ಮುಂಜಾನೆ 5.30ಗೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕಳಸ ಪಟ್ಟಣದ ಖಾಸಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿದ್ದು, ಬಸ್‌ ನಲ್ಲಿ ಸುಮಾರು 48 ಮಂದಿ ಪ್ರಯಾಣಿಕರಿದ್ದರೆಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

error: Content is protected !!