ಉಡುಪಿ: ಬ್ರಹ್ಮಾವರ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ಖಾಸಗಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ(ಡಿ.19) ನಡೆದಿದೆ.

ಪವನ್ ಮೃತ ಯುವಕ.
ಪವನ್ ಬೈಕ್ ನಲ್ಲಿ ಬಾರ್ಕೂರು ಕಡೆಯಿಂದ ಬ್ರಹ್ಮಾವರದ ಕಡೆ ರಸ್ತೆಯಲ್ಲಿ ಬಂದು, ಬಲಗಡೆ ಇಂಡಿಕೇಟರ್ ಹಾಕಿ ಅಂಬಿಕಾ ಫಾರಂ ಬಳಿಯ ಅಮ್ಮ ಶಾಮಿಯಾನ್ ಅಂಗಡಿ ಕಡೆಗೆ ತಿರುಗಿಸುತ್ತಿದ್ದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಬಸ್, ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದಿರುವುದಾಗಿದೆ.
ಇದರ ಪರಿಣಾಮ ಬೈಕ್ ಸವಾರ ಪವನ್, ಬಸ್ಸಿಗೆ ಬಡಿದು ರಸ್ತೆಗೆ ಬಿದ್ದು ಉರುಳಿಕೊಂಡು ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಗಾಯಾಳು ಪವನ್ ಅವರನ್ನು ತಕ್ಷಣವೇ ಸ್ಥಳೀಯರು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.