ಮಲಯಾಳಂನ ಖ್ಯಾತ ನಟ-ನಿರ್ದೇಶಕ ಶ್ರೀನಿವಾಸನ್ ಇನ್ನಿಲ್ಲ

ಕೊಚ್ಚಿ: ಮಲಯಾಳಂನ ಖ್ಯಾತ ನಟ-ನಿರ್ದೇಶಕ ಶ್ರೀನಿವಾಸನ್(69) ಇಂದು(ಡಿ.20) ಬೆಳಿಗ್ಗೆ ಸಮೀಪದ ತ್ರಿಪ್ಪುನಿತುರಾದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಣ್ಣೂರಿನವರಾದ ಶ್ರೀನಿವಾಸನ್ ಕಳೆದ ಹಲವು ವರ್ಷಗಳಿಂದ ಕೊಚ್ಚಿಯಲ್ಲಿ ವಾಸಿಸುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉದಯಂಪೀರೂರಿನ ತನ್ನ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಂಡು ಬಂದ ಬಳಿಕ ಅವರನ್ನು ತ್ರಿಪ್ಪುನಿತುರಾದ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ನಟನೆಯ ಜೊತೆಗೆ, ಅವರು ನಿರ್ದೇಶಕ, ಚಿತ್ರಕಥೆಗಾರ, ಡಬ್ಬಿಂಗ್ ಕಲಾವಿದ ಮತ್ತು ನಿರ್ಮಾಪಕರೂ ಆಗಿದ್ದರು. 1976 ರಲ್ಲಿ ‘ಮಣಿಮುಳಕ್ಕಂ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದ ಅವರು 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಇಬ್ಬರು ಪುತ್ರರಾದ ವಿನೀತ್ ಶ್ರೀನಿವಾಸನ್ ಮತ್ತು ಧ್ಯಾನ್ ಶ್ರೀನಿವಾಸನ್ ಕೂಡ ಚಿತ್ರರಂಗದಲ್ಲಿದ್ದಾರೆ.

error: Content is protected !!