ಕಲಬುರಗಿ: ಜಿಲ್ಲೆಯ ನಂದಿಕೂರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂದಿಕೂರ ಗ್ರಾಮದ ಬಿಜೆಪಿ ನೇತಾ ಮಲ್ಲಿನಾಥ ಬಿರಾದಾರ್ ಅವರ ನಿವಾಸದಲ್ಲಿ ನಡೆದಿದ್ದು, ಇಂದಿರಾ ಗಾಂಧಿ ಮರಣೋತ್ತರ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಸಿದ ಸಂದರ್ಭದಲ್ಲಿ ಅವರು ಮೃತಪಟ್ಟಿದ್ದಾರೆ.

ಕಲಬುರಗಿ ಶಹರದ ಬ್ರಹ್ಮಪುರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್(45) ಮೃತಪಟ್ಟ ಮಹಿಳೆ.
ರಾತ್ರಿ ಸಮಯದಲ್ಲಿ ಜ್ಯೋತಿ ಪಾಟೀಲ್ ಬಾಗಿಲು ಬಡಿದು ಎಲ್ಲರನ್ನು ಎಬ್ಬಿಸಿ, ಬಾಗಿಲು ತೆರೆದ ತಕ್ಷಣ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.
ಫರತಾಬಾದ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ. ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಪೊಲೀಸರು ಮೃತದೇಹವನ್ನು ಶವಪರೀಕ್ಷೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.