ಮಧ್ಯ ಪ್ರೌಢಶಾಲೆಗೆ ನೂತನ ಕಟ್ಟಡ ಲೋಕಾರ್ಪಣೆ!

ಸುರತ್ಕಲ್: ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಧ್ಯ ಇದರ ನೂತನವಾಗಿ ನಿರ್ಮಿಸಲ್ಪಟ್ಟ ಪ್ರೌಢಶಾಲೆಯ ಕಟ್ಟಡ ಹಾಗೂ ವಾರ್ಷಿಕೋತ್ಸವ ಸಮಾರಂಭ ಶನಿವಾರ ಬೆಳಗ್ಗೆ ನಡೆಯಿತು.
ಕೊಡುಗೈ ದಾನಿ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಇವರು ನೂತನವಾಗಿ 5 ಪ್ರೌಢಶಾಲೆ ಕೊಠಡಿಯನ್ನು ಸುಮಾರು 1 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದು ಅದರ ಉದ್ಘಾಟನೆಯನ್ನು ಶಾಸಕರಾದ ಉಮಾನಾಥ ಕೋಟ್ಯಾನ್ ನೆರವೇರಿಸಿದರು. ಬಳಿಕ ಮಾತಾಡಿದ ಅವರು, “ಇಲ್ಲಿನ ಸರಕಾರಿ ಶಾಲೆಯನ್ನು ಸುಸಜ್ಜಿತ ಕಟ್ಟಡ ಮತ್ತು ವಿಶಾಲವಾದ ಮೈದಾನದೊಂದಿಗೆ ಗ್ರಾಮಕ್ಕೆ ಅರ್ಪಿಸಿರುವ ಕೊಡುಗೈ ದಾನಿ ಕರುಣಾಕರ ಶೆಟ್ಟಿ ಮತ್ತವರ ಕುಟುಂಬಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ತಾನು ದುಡಿದ ಹಣದಲ್ಲಿ ಊರಿನ ಮಕ್ಕಳಿಗೆ ಶಿಕ್ಷಣ ನೀಡಲು ವ್ಯವಸ್ಥೆ ಕಲ್ಪಿಸಿರುವ ಅವರನ್ನು ಊರಿನ ಜನರು ನೆನಪಲ್ಲಿ ಇಟ್ಟುಕೊಳ್ಳಬೇಕು. ಮುಂದೆಯೂ ಈ ಶಾಲೆ ಇನ್ನಷ್ಟು ಅಭಿವೃದ್ಧಿಯಾಗಿ ಜನರಿಗೆ ಮತ್ತು ಮಕ್ಕಳಿಗೆ ನೆರವಾಗಲಿ“ ಎಂದರು


ವಿದ್ಯಾನಿಧಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಮಧ್ಯ ಅವರು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.


ವೇದಿಕೆಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಮಿಥುನ್ ರೈ, ಮುಂಬಯಿ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕರಾದ ದಿನೇಶ್ ಕುಮಾರ್, ಬಜಪೆ ಯೋಜನಾಧಿಕಾರಿ ಗಿರೀಶ್ ,ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಮಂಗಳೂರು ಉದ್ಯಮಿ ರಂಜನ್ ಚೌಟ ಮಧ್ಯ, ಶಿಕ್ಷಣ ಇಲಾಖೆ ಸಿ ಅರ್ ಪಿ ಸಿಕಂದರ್,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ,ಉಪಾಧ್ಯಕ್ಷ ಅನಿಲ್ ಸಾಲ್ಯಾನ್ ಸೂರಿಂಜೆ, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್,ಕೋಶಾಧಿಕಾರಿ ವಿಠಲ ಶೆಟ್ಟಿ ,ಸದಸ್ಯರಾದ ವಜ್ರಾಕ್ಷಿ ಪಿ ಶೆಟ್ಟಿ, ಪ್ರಕಾಶ್ ಶೆಟ್ಟಿ ಕುಲ್ಲಂಗಾಲು, ಬಾಲಕೃಷ್ಣ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಕಾವ್ಯ,ಶಶಿಕಲಾ, ದಿನೇಶ್ ಕುಲ್ಲಂಗಾಲು, ಹರೀಶ್ ಭಂಡಾರಿ,ಸುದೀರ್ ಭಟ್,ಪರಮೇಶ್ವರ್,ಸವಿತಾ ಕುಲಾಲ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ದೇವಾಡಿಗ,ಕಿರಣ್ ಶೆಟ್ಟಿ ಕುಲ್ಲಂಗಾಲು, ರಿತೇಶ್ ಶೆಟ್ಟಿ ಮಧ್ಯ, ಭಗವಾನ್ ಮಧ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮುಲ್ಕಿ ವಲಯ ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇಳೈರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಜೇನ್ ಡಿಸೋಜಾ ಧನ್ಯವಾದ ಸಮರ್ಪಿಸಿ ಸಹ ಶಿಕ್ಷಕಿ ಶೈಲಾ ಕಾರ್ಯಕ್ರಮ ನಿರೂಪಿಸಿದರು.

error: Content is protected !!