ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ಸುಳ್ಯ: ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಭಾನುವಾರ(ಡಿ.21) ನಡೆದಿದೆ.

ಗೂನಡ್ಕ ಬಳಿ, ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ನಡೆದಿದೆ.

ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಯಾವುದೇ ಪ್ರಾಣಾಪಾಯ ಆಗದೇ ಪಾರಾಗಿದ್ದಾರೆ.

ಪಲ್ಟಿಯಾದ ಲಾರಿಯನ್ನು ಜೆಸಿಬಿ ಬಳಸಿ ಮೇಲಕ್ಕೆತ್ತಲಾಯಿತು. ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!