ಕನ್ನಡದಲ್ಲಿ ರೈಲ್ವೆ ಪರೀಕ್ಷೆ ಬರೆಯಲು ಪ್ರಧಾನಿಯಿಂದ ಸಮ್ಮತಿ: ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ

ಕೋಲಾರ: ರೈಲ್ವೆ ನೇಮಕಾತಿ ಪರೀಕ್ಷೆ ಸೇರಿದಂತೆ ನೌಕರರ ಮುಂಬಡ್ತಿ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಹಲವು ದಿನಗಳಿಂದ ಆಗ್ರಹಗಳು ಕೇಳಿ ಬಂದಿದ್ದು, ಇದೀಗ ಕನ್ನಡಿಗರ ಬಹುದಿನಗಳ ಬೇಡಿಕೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ.

ರೈಲ್ವೆ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ರೈಲ್ವೆ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಕನ್ನಡಿಗರಿಗೆ ಅ‍ವಕಾಶ ನೀಡುವಂತೆ ತಾವು ಮತ್ತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗಿದ್ದು, ಇದಕ್ಕೆ ಮೋದಿ ಅವರು ಸಮ್ಮತಿಸಿದರು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಕನ್ನಡದಲ್ಲೇ ರೈಲ್ವೆ ಇಲಾಖೆ ಪರೀಕ್ಷೆ ಬರೆಯಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಒತ್ತಡ ಹಾಕಿ ಒಪ್ಪಿಸಿದ್ದೇವೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ಕನ್ನಡದಲ್ಲೇ ರೈಲ್ವೆ ಪ್ರವೇಶ ಪರೀಕ್ಷೆ ಬರೆಯಬೇಕು ಎಂಬ ಕನ್ನಡಿಗರ ಬಹುದಿನಗಳ ಬೇಡಿಕೆ ಶೀಘ್ರ ಈಡೇರಲಿದೆ. ಇದರಿಂದ ಕನ್ನಡಿಗರು ರೈಲ್ವೆ ಹುದ್ದೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.

error: Content is protected !!