ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಗಂಭೀರ

ಬಂಟ್ವಾಳ: ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಗಾಯಗೊಂಡವರು.

ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡು ಸವಾರ ಉಸ್ಮಾನ್ ಅವರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

ಕೂಡಲೇ ಗಂಭೀರವಾಗಿ ಗಾಯಗೊಂಡ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಟ್ವಾಳ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಮಾಹಿತಿ ಕಲೆ ಹಾಕುತ್ತಿದ್ದಾರೆ.

error: Content is protected !!