ಬೆಂಗಳೂರು : ‘ರಾಜ್ಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಮಸ್ಯೆಗಳನ್ನು ಸೃಷ್ಟಿಸುತ್ತಿರುವುದು ಮಾಧ್ಯಮಗಳು ಮಾತ್ರ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಜ್ಯದ ಸ್ಥಳೀಯ ಸಮಸ್ಯೆಯನ್ನು ಸ್ಥಳೀಯ ನಾಯಕರೇ ಇತ್ಯರ್ಥ ಮಾಡಿಕೊಳ್ಳಬೇಕು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಈ ಹೇಳಿಕೆ ಕುತೂಹಲ ಮೂಡಿಸಿದೆ.
ಈ ಬಗ್ಗೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ‘ನಮ್ಮಲ್ಲಿ ಸಮಸ್ಯೆಯೇ ಇಲ್ಲ. ಇನ್ನು ಬಗೆಹರಿಸಿಕೊಳ್ಳುವುದು ಏನಿದೆ? ನಾನೇನು ಹೇಳಬೇಕೋ ಹೇಳಿದ್ದೇನೆ. ಮುಖ್ಯಮಂತ್ರಿಗಳಿಗೆ ಏನು ಹೇಳಬೇಕೋ ಹೇಳಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ ಏನು ಹೇಳಬೇಕೋ ಹೇಳಿದ್ದೇನೆ. ಸಮಸ್ಯೆಯನ್ನೆಲ್ಲಾ ಸೃಷ್ಟಿ ಮಾಡುತ್ತಿರುವುದು ನೀವೇ ಎಂದು ಮಾಧ್ಯಮದವರಿಗೆ ಹೇಳಿದರು.