
ಚಿಕ್ಕಮಗಳೂರು: ರೋಗಿಯೊಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಕರೆತರುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಇಂದು(ಡಿ.23) ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಸಂಭವಿಸಿದೆ.
ಆಸ್ಪತ್ರೆ ಆವರಣಕ್ಕೆ ಪ್ರವೇಶಿಸುತ್ತಿದ್ದಂತೆಯೇ ಕಾರಿನ ಇಂಜಿನ್‌ನಿಂದ ಹೊರಹೊಮ್ಮಿದ ಬೆಂಕಿ ಕಿಡಿ, ಕ್ಷಣಗಳೊಳಗೆ ಭೀಕರ ಬೆಂಕಿಯಾಗಿ ವ್ಯಾಪಿಸಿತು. ಸನ್ನಿವೇಶ ತಿಳಿದ ಆಂಬ್ಯುಲೆನ್ಸ್ ಸಿಬ್ಬಂದಿ, ಕಾರಿನಲ್ಲಿದ್ದ ರೋಗಿ ಮತ್ತು ಇತರರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ.
ಆಸ್ಪತ್ರೆಯ ಸಿಬ್ಬಂದಿ, ಸುತ್ತಮುತ್ತಲಿನ ಜನರು ಆಸ್ಪತ್ರೆಯಲ್ಲಿದ್ದ ಅಗ್ನಿಶಾಮಕ ಸಾಮಗ್ರಿ ಮತ್ತು ನೀರಿನ ಸಹಾಯದಿಂದ ಬೆಂಕಿ ನಂದಿಸಲು ಯಶಸ್ವಿಯಾದರು. ಘಟನೆಯ ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.