ನವದೆಹಲಿ: ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ (JMI)ಪ್ರಾಧ್ಯಾಪಕರೊಬ್ಬರನ್ನು ಅಮಾನತುಗೊಳಿಸಲಾಗಿದೆ. ಸೆಮಿಸ್ಟರ್ ಪರೀಕ್ಷೆಯೊಂದಕ್ಕೆ Discuss the atrocities against muslim minorities in India giving suitable examples.(ಭಾರತದಲ್ಲಿನ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಚರ್ಚಿಸಿ ಸೂಕ್ತ ಉದಾಹರಣೆಗಳನ್ನು ನೀಡಿ) ಎಂಬ ಪ್ರಶ್ನೆಯನ್ನು ಆಯ್ಕೆ ಮಾಡಿದ ಪ್ರಶ್ನೆಯು ಸಾಮಾಜಿಕ ಮಾಧ್ಯಮದಲ್ಲಿ ವಿವಾದ ಹಾಗೂ ತೀವ್ರ ಆಕ್ರೋಶಕ್ಕೆ ಕಾರಣವಾದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಕುರಿತು ತನಿಖೆಗೆ ವಿಶ್ವವಿದ್ಯಾನಿಲಯ ತನಿಖಾ ಸಮಿತಿಯೊಂದನ್ನು ರಚಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ವಾರದ ಆರಂಭದಲ್ಲಿ ನಡೆದ BA (Hons)Social work semester Exmination ನಲ್ಲಿ ಕೇಳದ 15 ಅಂಕಗಳ ಪ್ರಶ್ನೆಗೆ ಸಂಬಂಧಿಸಿದ ವಿವಾದ ಇದಾಗಿದೆ. ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಚರ್ಚಿಸಿ, ಸೂಕ್ತ ಉದಾಹರಣೆಗಳನ್ನು ನೀಡುವಂತೆ ಪ್ರಶ್ನೆ ಕೇಳಲಾಗಿತ್ತು. ಪ್ರೊ.ವೀರೇಂದ್ರ ಬಾಲಾಜಿ ಶಹಾರೆ ಈ ಪ್ರಶ್ನೆ ಆಯ್ಕೆ ಮಾಡಿದ್ದರು ಎನ್ನಲಾಗಿದೆ.
ದೂರುಗಳು ಬಂದ ನಂತರ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ, ಸಂಬಂಧಪಟ್ಟ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೈಕ್ಷಣಿಕ ಜವಾಬ್ದಾರಿ ಮತ್ತು ಸಾಂಸ್ಥಿಕ ಶಿಸ್ತನ್ನು ಎತ್ತಿ ಹಿಡಿಯಲು ಈ ಕ್ರಮ ಕೈಗೊಳ್ಳಲಾಗಿದೆ. ರಿಜಿಸ್ಟ್ರಾರ್ ಸಿಎ ಶೇಖ್ ಸಫಿವುಲ್ಲಾ ಅವರು ಸಹಿ ಮಾಡಿದ ಆದೇಶ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಮುಂದಿನ ಆದೇಶದವರೆಗೆ ಅಮಾನತುಗೊಳಿಸಿರುವುದನ್ನು ದೃಢಪಡಿಸಿದೆ.
ಜಾಮಿಯಾ ಮಿಲಿಯಾ ಇಸ್ಲಾಮಿಯಾ ಎಲ್ಲಾ ಸಮುದಾಯದ ವಿದ್ಯಾರ್ಥಿಗಳನ್ನು ಹೊಂದಿರುವ ಕೇಂದ್ರೀಯ ವಿಶ್ವವಿದ್ಯಾನಿಲಯವಾಗಿದೆ. ಪ್ರಶ್ನೆಯು ದುರುದ್ದೇಶಪೂರಿತ ಉದ್ದೇಶವನ್ನು ತೋರಿಸುತ್ತದೆ ಎಂದು ಗುಪ್ತಾ ಎಂಬುವರು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.