ಸ್ಕೂಲ್ ಬಸ್ ಚಾಲಕನಿಂದ ಲೈಂಗಿಕ ದೌರ್ಜನ್ಯ: ಮಗುವಿಗೆ ಜನ್ಮ ನೀಡಿದ ಎಸೆಸೆಲ್ಸಿ ವಿದ್ಯಾರ್ಥಿನಿ

ಹಾಸನ: ಎಸೆಸೆಲ್ಸಿ ವಿದ್ಯಾರ್ಥಿನಿಯ ಮೇಲೆ ಆಕೆ ಕಲಿಯುತ್ತಿದ್ದ ಖಾಸಗಿ ಶಾಲೆಯ ಸ್ಕೂಲ್ ಬಸ್ ಚಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದು, ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ರಂಜಿತ್ ವಿದ್ಯಾರ್ಥಿನಿಯ ಮೇಲೆ ದೌರ್ಜನ್ಯ ಎಸಗಿದ ಸ್ಕೂಲ್‌ ಬಸ್‌ ಚಾಲಕ.

ಮೂರು ದಿನಗಳ ಹಿಂದೆ ಶಾಲೆಯಲ್ಲಿ ಕ್ರೀಡಾಕೂಟ ನಡೆಯುತ್ತಿದ್ದ ವೇಳೆ ಸಂತ್ರಸ್ತ ಬಾಲಕಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ತಕ್ಷಣವೇ ಆಕೆಯನ್ನು ಹಿಮ್ಸ್ಗೆ ದಾಖಲಿಸಲಾಗಿದ್ದು, ಅಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಒಪ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಬಾಲಕಿಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಹೇಳಲಾಗುತ್ತಿದೆ.

ಆರೋಪಿಯು ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: Content is protected !!