
ಚಿತ್ರದುರ್ಗ: ಸೀ ಬರ್ಡ್ ಖಾಸಗಿ ಟ್ರಾವೆಲ್ ಸಂಸ್ಥೆಗೆ ಸೇರಿದ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ತಡರಾತ್ರಿ ಸಂಭವಿಸಿದೆ.

ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿತ್ತು ಎನ್ನಲಾಗಿದೆ.
ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್ ಎರಡೂ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ.

ದುರಂತದಲ್ಲಿ 17 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.