ಸ್ಲೀಪರ್‌ ಬಸ್‌ಗಳ ಸುರಕ್ಷತೆಗೆ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ: ಎಚ್‌.ಡಿ.ಕುಮಾರಸ್ವಾಮಿ

ದಾವಣಗೆರೆ: ಚಿತ್ರದುರ್ಗದ ಹಿರಿಯೂರು ತಾಲೂಕಿನಲ್ಲಿ ಸಂಭವಿಸಿದ ಬಸ್‌ ದುರಂತ ಅತ್ಯಂತ ದುಃಖದ ಸಂಗತಿ. ಸಾವಿನಲ್ಲಿರುವ ಕುಟುಂಬಗಳ ನೋವು ಅರ್ಥವಾಗಿದೆ. ನೋವಿನಿಂದ ಹೊರಬರುವ ಶಕ್ತಿಯನ್ನು ಸಂತ್ರಸ್ತ ಕುಟುಂಬಗಳಿಗೆ ದೇವರು ಕರುಣಿಸಲಿ ಹಾಗೆಯೇ ಸ್ಲೀಪರ್‌ ಕೋಚ್‌ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ರಾತ್ರಿ ಸಂದರ್ಭದ ಪ್ರಯಾಣ ಅಸುರಕ್ಷಿತ ಎಂಬ ಭಾವನೆ ಮೂಡಿದೆ. ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ನಿರೀಕ್ಷೆ ಮೀರಿದ ಸಾವು–ನೋವು ಉಂಟಾಗುತ್ತಿದೆ. ಸ್ಲೀಪರ್‌ ಕೋಚ್‌ ಬಸ್‌ಗಳಲ್ಲಿ ಅವಘಡ ಸಂಭವಿಸಿದಾಗ ತುರ್ತಾಗಿ ಪಾರಾಗುವ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದೆ. ಬಸ್‌ ಮಾಲೀಕರೊಂದಿಗೆ ಚರ್ಚಿಸಿ ಮಾರ್ಗಸೂಚಿ ರೂಪಿಸಬೇಕು ಎಂದು ಆಗ್ರಹಿಸಿದರು.

error: Content is protected !!