
ಮೈಸೂರು: ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಬಲೂನ್ ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದು, ಐದು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಅರಮನೆ ಹೊರಗಡೆ ಯುವಕನೊಬ್ಬ ಸೈಕಲ್ ನಲ್ಲಿ ಬಲೂನ್ ಮಾರುತ್ತಿದ್ದು, ಗ್ಯಾಸ್ ತುಂಬಿಸುವ ವೇಳೆ ಬ್ಲಾಸ್ಟ್ ಆಗಿದ್ದು, ತೀವ್ರತೆಗೆ ದೇಹಗಳು ಛಿದ್ರ ಛಿದ್ರಗೊಂಡಿದೆ. ಘಟನೆಯಲ್ಲಿ ಬಲೂನ್ ಮಾರುವ ಯುವಕ ಸೇರಿ ಮೂವರು ಸಾವನ್ನಪ್ಪಿದ್ದು, ಐದು ಮಂದಿಯ ಗಂಭೀರ ಸ್ಥಿತಿಯಲ್ಲಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅರಮನೆ ಆವರಣದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.