ನಾಳೆ ಎಸ್‌ಸಿಡಿಸಿಸಿ ನೌಕರರ ಒಕ್ಕೂಟದ ವತಿಯಿಂದ ಕ್ರೀಡಾಕೂಟ–2025

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಒಕ್ಕೂಟ (ರಿ.), ಮಂಗಳೂರು ಇದರ ಆಶ್ರಯದಲ್ಲಿ ಆಯೋಜಿಸಿರುವ ಕ್ರೀಡಾಕೂಟ–2025ರ ಉದ್ಘಾಟನಾ ಸಮಾರಂಭವು ಡಿಸೆಂಬರ್ 27ರಂದು (ಶನಿವಾರ) ಬೆಳಗ್ಗೆ 9.00 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಲಿದ್ದಾರೆ. ನೌಕರರ ಒಕ್ಕೂಟದ ಅಧ್ಯಕ್ಷರಾದ ಕರುಣಾಕರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಗೋಪಾಲಕೃಷ್ಣ ಭಟ್, ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡದ ಸಹಾಯಕ ನಿರ್ದೇಶಕರಾದ ಪ್ರದೀಪ್ ಡಿ’ಸೋಜ ಭಾಗವಹಿಸಲಿದ್ದಾರೆ.

ನೌಕರರ ನಡುವೆ ಸೌಹಾರ್ದತೆ, ಆರೋಗ್ಯಕರ ಸ್ಪರ್ಧೆ ಮತ್ತು ತಂಡಭಾವನೆ ಬೆಳೆಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಈ ಸಂದರ್ಭದಲ್ಲಿ ನೌಕರರ ಒಕ್ಕೂಟದ ಉಪಾಧ್ಯಕ್ಷ ಕೆ. ರಾಜಾರಾಮ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜೋವಿನ್ ಪ್ರಕಾಶ್ ಡಿ’ಸೋಜ, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಒಕ್ಕೂಟದ ಎಲ್ಲಾ ಸದಸ್ಯರು ಉಪಸ್ಥಿತರಿರುವರು.

ಕ್ರೀಡಾಕೂಟದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಸಂಘದ ಪದಾಧಿಕಾರಿಗಳು ಕೋರಿದ್ದಾರೆ

error: Content is protected !!