ಬೆಂಗಳೂರು: ಕನ್ನಡದ ಎರಡು ದೊಡ್ಡ ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗಿದ್ದು, ಸುದೀಪ್ ನಟನೆಯ ‘ಮಾರ್ಕ್’ ಮತ್ತು ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾಗಳು ಡಿಸೆಂಬರ್ 25 ರಂದು ಬಿಡುಗಡೆ ಆಗಿದ್ದು, ಮೊದಲ ದಿನ ಉತ್ತಮ ಗಳಿಕೆ ಮಾಡಿವೆ.

ಎರಡೂ ಸಿನಿಮಾಗಳು ಸಹ ಬಹಳ ನಿರೀಕ್ಷೆ ಹುಟ್ಟಿಸಿದ್ದು, ಮೊದಲ ದಿನ ಉತ್ತಮ ಗಳಿಕೆಯನ್ನೇ ಮಾಡಿರುವ ಈ ಸಿನಿಮಾಗಳು ಎರಡನೇ ದಿನ ಕ್ರಿಸ್ಮಸ್ ಪ್ರಯುಕ್ತ ರಜೆ ಇದ್ದ ಕಾರಣ ಸಹಜವಾಗಿಯೇ ಸಿನಿಮಾದ ಕಲೆಕ್ಷನ್ ಹೆಚ್ಚಾಗಿತ್ತು.
ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆ ಆದ ಮೊದಲ ದಿನವೇ ಸುಮಾರು 7.50 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಆದರೆ ಎರಡನೇ ದಿನ ಶುಕ್ರವಾರ 3.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇನ್ನು ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಗುರುವಾರ 5.50 ಸಿನಿಮಾ ಕೋಟಿ ರೂಪಾಯಿ ಗಳಿಕೆ ಮಾಡಿದ್ದು, ಎರಡನೇ ದಿನ ಶುಕ್ರವಾರ ‘45’ ಸಿನಿಮಾ 2.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವೀಕ್ ಡೇನಲ್ಲಿ ಇದು ಸಾಮಾನ್ಯ ಕಲೆಕ್ಷನ್ ಏನಲ್ಲ. ಶನಿವಾರ ಮತ್ತು ಭಾನುವಾರ ಕಲೆಕ್ಷನ್ ಮತ್ತೆ ಏರಿಕೆಯಾಗುವ ಸಾಧ್ಯತೆಗಳು ಹೆಚ್ಚಿವೆ.
ಎರಡೂ ಸಿನಿಮಾಗಳು ಒಂದೇ ದಿನ ಬಿಡುಗಡೆ ಆಗಿದ್ದು, ಒಂದರ ಕಲೆಕ್ಷನ್ ಮೇಲೆ ಇನ್ನೊಂದು ಸಿನಿಮಾ ಪ್ರಭಾವ ಬೀರುವುದು ಸಾಮಾನ್ಯ. ಆದರೆ ಈಗ ಹೋಗುತ್ತಿರುವ ರೀತಿ ನೋಡಿದರೆ ಎರಡೂ ಸಿನಿಮಾಗಳು ಒಂದು ಉತ್ತಮ ಗಳಿಕೆ ಮಾಡುವ ಭರವಸೆ ಮೂಡಿಸಿವೆ. ಎರಡೂ ಸಿನಿಮಾಗಳ ಬಗ್ಗೆ ಪ್ರೇಕ್ಷಕರು ಧನಾತ್ಮಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಹಾಗಾಗಿ ಎರಡೂ ಸಿನಿಮಾಗಳು ಉತ್ತಮ ಗಳಿಕೆ ಮಾಡುವ ದಟ್ಟ ಸಾಧ್ಯತೆ ಇದೆ.