💀💀ಬುರುಡೆ ಕೇಸ್‌ನಲ್ಲಿ ಆರು ಮಂದಿ ಆರೋಪಿಗಳ ಉಲ್ಲೇಖ!: ಜ.3ಕ್ಕೆ ತೀರ್ಪು ಮುಂದೂಡಿಕೆ💀💀

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ವಹಿಸಿರುವ ತನಿಖೆ ಸಂಬಂಧಿ ವರದಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಲ್ಪಟ್ಟಿದ್ದು, ಸೋಮವಾರ ನಡೆದ ವಿಚಾರಣೆಯ ನಂತರ, ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ತೀರ್ಪನ್ನು ಜನವರಿ 3ಕ್ಕೆ ಮುಂದೂಡಿದ್ದಾರೆ.

ಎಸ್‌ಐಟಿ ವರದಿ ನಂಬರ್ 20ರಂದು ನ್ಯಾಯಾಲಯಕ್ಕೆ ಸಲ್ಲಿಸಲ್ಪಟ್ಟಿದ್ದು, ವರದಿಯಲ್ಲಿ ಚಿನ್ನಯ್ಯ ಸಹಿತ 6 ಮಂದಿಯನ್ನು ಆರೋಪಿಗಳನ್ನಾಗಿ ಉಲ್ಲೇಖಿಸಲಾಗಿದೆ. ತನಿಖೆಯ ವಿವರಗಳು ದಾಖಲಿಸಿ, ಮುಂದಿನ ತನಿಖೆಗೆ ಮಾರ್ಗದರ್ಶನ ನೀಡುವಂತೆ ಎಸ್‌ಐಟಿ ಪರ ಸಹಾಯಕ ಸರ್ಕಾರಿ ಅಭಿಯೋಜಕ ದಿವ್ಯರಾಜ್ ಹೆಗ್ಡೆ ವಾದ ಮಂಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ನ್ಯಾಯಾಲಯಕ್ಕೆ ಸಲ್ಲಿಸಿ, ಕಾನೂನು ಕ್ರಮ ಕೈಗೊಳ್ಳಲು ಮನವರಿಕೆ ಮಾಡಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ ನಡಿ ಸುಳ್ಳು ಸಾಕ್ಷಿಯ ಅಪರಾಧಕ್ಕೆ ಸಂಬಂಧಿಸಿದಂತೆ 3,923 ಪುಟಗಳ ವರದಿದೊಂದಿಗೆ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ವಿನಂತಿಸಲಾಗಿದ್ದು, ಕೆಲವೊಂದು ಮಹತ್ವದ ಅಂಶಗಳನ್ನು ನ್ಯಾಯಾಲಯದ ಮುಂದೆ ಮಂಡಿಸಿ ಮುಂದಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ.

error: Content is protected !!