ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಧರೆಗೆ ಡಿಕ್ಕಿ: ಮಗು ಸಾ*ವು, ಮೂವರು ಗಂಭೀರ

ಮಂಗಳೂರು: ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಗೆ ಸೇರಿದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಮಗುವೊಂದು ಮೃತಪಟ್ಟಿದ್ದು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ ಮಾರ್ಗದಲ್ಲಿ ನಡೆದಿದೆ.

ಅಪಘಾತದಲ್ಲಿ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಶರೀಫಾ ಬಿ (57), ಇಮಾಮ್ ಸಾಬ್ (73) ಹಾಗೂ ಸಫಾನ (28) ಅಪಘಾತದಲ್ಲಿ ಗಾಯಗೊಂಡವರು.

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ‌ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!