ಕಾರ್ಕಳ ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಭೇಟಿ

ಕಾರ್ಕಳ: ವಿಧಾನ ಪರಿಷತ್‌ ಶಾಸಕರಾದ ಮಂಜುನಾಥ್ ಭಂಡಾರಿ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಿವಪುರ, ನಡಪಾಲ್, ಮುದ್ರಾಡಿ, ವರಂಗ, ನಿಟ್ಟೆ, ಕಲ್ಯಾ, ನಂದಳಿಕೆ ಹಾಗೂ ಬೆಳ್ಮಣ್ ಗ್ರಾಮ ಪಂಚಾಯಿತಿಗಳಿಗೆ ಡಿ.31ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಉದಯ್ ಶೆಟ್ಟಿ ಮುನಿಯಾಲು, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಅಲ್ಲದೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶುಭೋಧ್ ರಾವ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೋಪಿನಾಥ್ ಭಟ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಹಾಗೂ ಪೆರ್ಡೂರು ಗ್ರಾಮ ಪಂಚಾಯಿತಿ ಸದಸ್ಯರಾದ ನವೀನ್ ಸಾಲಿಯಾನ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

error: Content is protected !!