ಬೈಕ್‌ ಸವಾರ ಫುಟ್ ಪಾತ್​​ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾ*ವು!!

ಬೆಂಗಳೂರು: ಹೊಸ ವರ್ಷಾಚರಣೆಯ ನಂತರ ನಸುಕಿನ ಸಮಯ 3 ಗಂಟೆ ಸುಮಾರಿಗೆ ಬೈಕ್​ನಲ್ಲಿ ವೇಗವಾಗಿ ಹೋಗುತ್ತಿದ್ದ ವೇಳೆ ಯುವಕ ಬೈಕ್ ನಿಯಂತ್ರಣ ತಪ್ಪಿ ಫುಟ್‌ಪಾತ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಯುವಕನ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿ ಘಟನೆ ನಗರದ ರಾಮಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.

ಸಾಂದರ್ಭಿಕ ಚಿತ್ರ

ಹೊಸ ವರ್ಷಾಚರಣೆಯ ನಂತರ ನಸುಕಿನ ಜಾವದಲ್ಲಿ ಯುವಕ ಮನೆಗೆ ಮರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಫುಟ್‌ಪಾತ್‌ಗೆ ಡಿಕ್ಕಿ ಹೊಡೆದಿರುವುದಾಗಿ ಅಂದಾಜಿಸಲಾಗಿದೆ. ಬೈಕ್ ಸಂಪೂರ್ಣ ಜಖಂ ಆಗಿದ್ದು, ಯುವಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನಪ್ಪಿದ್ದಾನೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹೈಗ್ರೌಂಡ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಯುವಕನ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಅಪಘಾತಕ್ಕೆ ವೇಗ ಮತ್ತು ನಿದ್ರಾಹೀನತೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

error: Content is protected !!