ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇವರ ಸಹಯೋಗದಲ್ಲಿ ಬಂಟರ ಕ್ರೀಡೋತ್ಸವ ಜನವರಿ 11 ರಂದು ಭಾನುವಾರ ಸುರತ್ಕಲ್ ಗೋವಿಂದ ದಾಸ ಕಾಲೇಜು ಮೈದಾನದಲ್ಲಿ ನಡೆಯಲಿದೆ.


ಬಂಟರ ಕ್ರೀಡೋತ್ಸವ ಕಾರ್ಯಕ್ರಮವನ್ನು ಬೆಳಿಗ್ಗೆ 8.30ಕ್ಕೆ ಬಂಟರ ಯಾನೆ ನಾಡವರ ಮಾತೃಸಂಘದ ಮಂಗಳೂರು ತಾಲೂಕು ಸಮಿತಿಯ ಸಂಚಾಲಕರಾದ ವಸಂತ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಾಳ ಜಗನ್ನಾಥ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಕ್ಕಾರು ಬಂಟರ ಸಂಘದ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ಎಕ್ಕಾರು, ಉದ್ಯಮಿ ಹರೀಶ್ ಶೆಟ್ಟಿ ಪೆರ್ಮುದೆ, ಮಂಗಳೂರು ಯಥಾಥ್೯ ಸೋಶಿಯಲ್ ನ ಈಶ್ವರ್ ಪ್ರಸಾದ್ ಶೆಟ್ಟಿ ಭಾಗವಹಿಸಲಿದ್ದಾರೆ. ಸಂಘದ ಸ್ಥಾಪಕಾಧ್ಯಕ್ಷ ರೋಹಿತಾಕ್ಷ ರೈ ಕುಳಾಯಿಗುತ್ತು ಉಪಸ್ಥಿತರಿರುವರು.


ಮಧ್ಯಾಹ್ನ 12 ಗಂಟೆಗೆ ನಡೆಯುವ ಅಭಿನಂದನಾ ಸಮಾರಂಭದಲ್ಲಿ 2025 ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷ ಡಾ ಪಿ ವಿ ಶೆಟ್ಟಿ ಮುಂಬೈ ಅವರಿಗೆ ಗೌರವ ಸನ್ಮಾನ ನಡೆಯಲಿದೆ. ಸಮಾರಂಭವನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ ಎಂ ಮೋಹನ್ ಆಳ್ವ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮುಂಬೈ ವಿ ಕೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕರಾದ ಡಾ ವೈ ಭರತ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಯುವ ವಿಭಾಗದ ಅಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರ್, ಚಿತ್ರನಟ, ನಿರ್ದೇಶಕ ರೂಪೇಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಮಾಜೀ ಅಧ್ಯಕ್ಷರಾದ ಎಂ ದೇವಾನಂದ ಶೆಟ್ಟಿಯವರ ಉಪಸ್ಥಿತಿಯಲ್ಲಿ ವಿಶ್ವಕಪ್ ವಿಜೇತ ಅಂತರಾಷ್ಟ್ರೀಯ ಮಹಿಳಾ ಕಬಡ್ಡಿ ಆಟಗಾರ್ತಿ ಕುಮಾರಿ ಧನಲಕ್ಷಿ ಪೂಜಾರಿ ಸುರತ್ಕಲ್ ಅವರನ್ನು ಸಮಾರಂಭದಲ್ಲಿ ಅಭಿನಂದಿಸಲಾಗುವುದು.

ಸಂಜೆ 5.30 ಕ್ಕೆ ಸಮಾರೋಪ ಸಮಾರಂಭದಲ್ಲಿ ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ ಫೇರ್ ಟ್ರಸ್ಟ್ (ರಿ) ನ ಕಾರ್ಯಾಧ್ಯಕ್ಚ ದೇವಿಚರಣ್ ಶೆಟ್ಟಿ, ಒಡಿಯೂರು ಶ್ರೀ ವಿವಿದೋದ್ದೇಶ ಸೌಹಾರ್ದ ಸಹಕಾರಿ (ನಿ) ಅಧ್ಯಕ್ಷ ಲಯನ್ ಸುರೇಶ್ ರೈ, ಸುರತ್ಕಲ್ ಬಾಲಾಜಿ ಐಕಾನ್ ಸಂಸ್ಥೆಯ ಆಡಳಿತ ನಿರ್ದೇಶಕ ಹರೀಶ್ ಶೆಟ್ಟಿ ಕಾವೂರು ಭಾಗವಹಿಸಲಿದ್ದಾರೆ. ಸಂಘದ ಮಾಜಿ ಅಧ್ಯಕ್ಷರುಗಳಾದ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ಸುಧಾಕರ ಎಸ್ ಪೂಂಜ, ಎಂ ಲೋಕಯ್ಯ ಶೆಟ್ಟಿ ಉಪಸ್ಥಿತರಿರುವರು.
ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಪುರುಷರಿಗೆ ಹಾಗೂ ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ದೆಗಳನ್ನು ಆಯೋಜಿಸಲಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.