ಫೆ.23: ಪ್ರಧಾನಿ ಮೋದಿ ರಾಜ್ಯ ಪ್ರವಾಸ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 23ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದು, ನಿರ್ಮಾಲನಂದ ಶ್ರೀಗಳ ಪಟ್ಟಾಭಿಷೇಕ ಹಾಗೂ ಬಾಲಗಂಗಾಧರನಾಥ ಶ್ರೀಗಳ ಐಕ್ಯ ಸ್ಥಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬರಲಿರುವ ಪ್ರಧಾನಿ ಮೋದಿ ಅವರು ಆ ನಂತರ ವಿಶೇಷ ವಿಮಾನದ ಮೂಲಕ ಮಂಡ್ಯಕ್ಕೆ ತೆರಳಲಿದ್ದಾರೆ.

error: Content is protected !!