ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬೈಕ್ ಸವಾರ ಸಾವು

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ನಗರದ ನಾಗರಬಾವಿಯ ಮಲೇ ಮಹದೇಶ್ವರ ದೇವಸ್ಥಾನದ ಬಳಿ ಶನಿವಾರ(ಜ.3) ರಾತ್ರಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತುಮರಿ ಗ್ರಾಮದ ನಿವಾಸಿ ಪ್ರಕಾಶ್ ಎಂ.ಡಿ.(29) ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ಸಣ್ಣ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ನೇಹಿತನ ಜತೆ ಬೈಕ್‌ನಲ್ಲಿ ಪರಿಚಯಸ್ಥರೊಬ್ಬರ ಮಗುವಿನ ಜನ್ಮದಿನ ಕಾರ್ಯಕ್ರಮಕ್ಕೆ ಹೋಗಿ ವಾಪಸ್‌ ಬರುತ್ತಿದ್ದ ವೇಳೆ, ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವಿಗೀಡಾದರು. ಗೋಲ್ಡ್ ಲೋನ್ ಖಾಸಗಿ ಕಂಪನಿಯಲ್ಲಿ ಪ್ರಕಾಶ್ ಮಾರಾಟ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದರು.

ಜ್ಞಾನಭಾರತಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಲಾರಿಯನ್ನು ವಶಕ್ಕೆ ಪಡೆದು, ಚಾಲಕನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!