
ಚಿತ್ರದುರ್ಗ: ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲು ಬಳಿ ಸಂಭವಿಸಿದೆ.
ಕಿರಣ್(25), ಅರುಣ್(32), ಗಿರಿರಾಜ್(46), ಹನುಮಂತಪ್ಪ (32) ಮೃತ ದುರ್ದೈವಿಗಳು.


ಮಾಯಕೊಂಡದಲ್ಲಿ ಅಡಿಕೆ ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದರು. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಗಾಯಾಳು ಹನುಮಂತಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಕಲ್ಲವ್ವ ನಾಗತಿಹಳ್ಳಿಯವರಾಗಿದ್ದಾರೆ.
ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.