ಪ್ರೀತಿಸುವಾಗ ಇರದ ಜಾತಿ ಮದುವೆಯಾಗುವಾಗ ಬಂದಿತೇಕೆ?

ಮಂಗಳೂರು: ಗುರುಪುರದಲ್ಲಿ ಯುವತಿ ಆತ್ಮಹತ್ಯೆಗೆ ಜಾತಿ ಕಾರಣದ ನಿರಾಕರಣೆ, ನಿರ್ಲಕ್ಷ್ಯವೇ ಕಾರಣ ಎನ್ನುವುದು ಪೊಲೀಸ್ ಮೂಲಗಳಿಂದ ಮಾಹಿತಿ ಲಭಿಸಿದ್ದು, ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.


ಗಂಜಿಮಠ ಮಳಲಿ (ಮಣೇಲ್) ನಿವಾಸಿ ಮನೋಜ್ ಅಲಿಯಾಸ್ ಮುರಳಿ ಪೂಜಾರಿ ಬಂಧಿತ ಆರೋಪಿ.

ಮೂಡಬಿದ್ರೆಯ ನವ್ಯಾ (20) ಸೋಮವಾರ ಸ್ನೇಹಿತೆಯೊಂದಿಗೆ ಭೇಟಿಯಾದ ಬಳಿಕ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ನವ್ಯಾ ಆತ್ಮಹತ್ಯೆಗೆ ಮೊದಲು ಬರೆದ ಡೆತ್ ನೋಟ್‌ನಲ್ಲಿ ಮನೋಜ್ ಹೆಸರನ್ನು ಉಲ್ಲೇಖಿಸಿದ್ದಾಳೆ. ನವ್ಯಾ ಕಳೆದ ಒಂದು ವರ್ಷದಿಂದ ಮೂಡಬಿದ್ರೆಯ ಜ್ಯುವೆಲ್ಲರಿ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾಗ್ರಾಂ ಮೂಲಕ ಮನೋಜ್ ಪರಿಚಯವಾಗಿ ಇಬ್ಬರ ನಡುವೆ ಪ್ರೀತಿ ಸಂಬಂಧ ಬೆಳೆದಿದ್ದು, ಸಂಬಂಧವು ದೈಹಿಕ ಹಂತದವರೆಗೆ ತಲುಪಿತ್ತು ಎನ್ನಲಾಗಿದೆ.

ನವ್ಯಾ ಮದುವೆಗೆ ಒತ್ತಾಯಿಸುತ್ತಿದ್ದರೆ, ಮನೋಜ್ ಜಾತಿ ಕಾರಣ ಮುಂದಿಟ್ಟುಕೊಂಡು ಮದುವೆಗೆ ಹಿಂದೇಟು ಹಾಕುತ್ತಿದ್ದನೆಂದು ಆರೋಪಿಸಲಾಗಿದೆ. ಮದುವೆಯ ವಿಚಾರವಾಗಿ ನವ್ಯಾಳನ್ನು ನಿರ್ಲಕ್ಷಿಸಿ ದೂರವಿಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.


ನವ್ಯಾಳ ಮನೆಯವರು ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಮನೋಜ್ “ನಿನ್ನೊಂದಿಗೆ ಮದುವೆಯಾಗುವುದಿಲ್ಲ” ಎಂದು ಹೇಳುವುದರ ಜೊತೆಗೆ ಆತ್ಮಹತ್ಯೆಗೆ ಪ್ರಚೋದಿಸುವ ರೀತಿಯ ಮಾತುಗಳನ್ನು ಆಡಿದ್ದಾನೆ ಎನ್ನಲಾಗಿದೆ. ಇದಲ್ಲದೆ, ಜಾತಿ ಕುರಿತು ಅವಮಾನಕಾರಿ ಮಾತುಗಳಿಂದ ನವ್ಯಾಳನ್ನು ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಈ ಮಾನಸಿಕ ಒತ್ತಡದಿಂದ ನವ್ಯಾ ಆತ್ಮಹತ್ಯೆಗೆ ಮುಂದಾಗಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

BREAKING NEWS!!! ಗುರುಪುರ: ನದಿಗೆ ಹಾರಿದ ಯುವತಿಯ ಶವ ಪತ್ತೆ

ಪೊಲೀಸರು ನವ್ಯಾ ಬರೆದ ಡೆತ್ ನೋಟ್ ಹಾಗೂ ಮನೋಜ್‌ಗೆ ಅವಳು ಬರೆದಿದ್ದ ನಾಲ್ಕೈದು ಸಾಲಿನ ಪತ್ರದ ಫೋಟೋ ತುಣುಕುಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಡೆತ್ ನೋಟ್‌ನಲ್ಲಿ ಡಿಸೆಂಬರ್ 20ರೊಳಗೆ ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಉಲ್ಲೇಖಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ಲಭಿಸಿದೆ.

“ಪ್ರೀತಿ ಸೋತರೆ ಸಾಯಬೇಕಾ?”: ಗುರುಪುರ ಸೇತುವೆಯಲ್ಲಿ ನವ್ಯಾ ಬಿಟ್ಟುಹೋದ ಅಂತಿಮ ಸಂದೇಶವೇನು?

ಪ್ರೀತಿ ಸಂಬಂಧದಲ್ಲಿ ಜಾತಿ ಅಡ್ಡಿ, ನಿರ್ಲಕ್ಷ್ಯ ಮತ್ತು ಸಾಮಾಜಿಕ ಒತ್ತಡಗಳು ಎಷ್ಟು ಅಪಾಯಕಾರಿ ಪರಿಣಾಮಗಳಿಗೆ ದಾರಿ ಮಾಡಿಕೊಡಬಹುದು ಎಂಬುದಕ್ಕೆ ಈ ಘಟನೆ ಮತ್ತೊಂದು ಕಟುವಾದ ಉದಾಹರಣೆಯಾಗಿದೆ. ಪ್ರಕರಣದ ಎಲ್ಲ ಆಯಾಮಗಳನ್ನು ಪೊಲೀಸರು ಗಂಭೀರವಾಗಿ ಪರಿಶೀಲಿಸುತ್ತಿದ್ದಾರೆ.

error: Content is protected !!