ವಿಟ್ಲ: ಹಲ್ಲೆ–ದೊಂಬಿ ಹಾಗೂ ನಿಷೇಧಿತ ಮಾದಕ ದ್ರವ್ಯ ಸೇವನೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಿಟ್ಲ ಕಸಬ ಗ್ರಾಮದ ಅಬ್ದುಲ್ ಖಾದರ್ @ ಶೌಕತ್‌ಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ.

ವಿಟ್ಲ ಪೊಲೀಸ್ ಠಾಣೆಯ ವರದಿ ಆಧರಿಸಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು, ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಆತನನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶ ನೀಡಿದ್ದಾರೆ. ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ.


ಆದೇಶದಂತೆ, ದಿನಾಂಕ ಗುರುವಾರ(ಜ.8) ದಂದು ಆರೋಪಿಯನ್ನು ಪೊಲೀಸ್ ಭದ್ರತೆಯೊಂದಿಗೆ ಮೂಡಿಗೆರೆ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ.