ಕಾಫಿ ಹಸ್ಕ್ ತುಂಬಿದ್ದ ಲಾರಿ ಬೆಂಕಿಗೆ ಧಗಧಗ

ಸುಳ್ಯ: ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾಫಿ ಹಸ್ಕ್ ತುಂಬಿದ ಲಾರಿಯೊಂದು ದೇವರಕೊಲ್ಲಿ ಸಮೀಪ ಇಂದು(ಜ.9) ಬೆಳಿಗ್ಗೆ ಸುಮಾರು 6 ಗಂಟೆಗೆ ಆಕಸ್ಮಿಕವಾಗಿ ಅಗ್ನಿ ಅವಘಡಕ್ಕೆ ಒಳಗಾಗಿದೆ.


ಚಲಿಸುತ್ತಿದ್ದ ಲಾರಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು ಕೆಲವೇ ನಿಮಿಷಗಳಲ್ಲಿ ಬೆಂಕಿ ಸಂಪೂರ್ಣವಾಗಿ ಲಾರಿಯನ್ನು ಆವರಿಸಿತು. ಪರಿಣಾಮ ಲಾರಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ.


ಸುದ್ದಿ ತಿಳಿದ ಕೂಡಲೇ ಮಡಿಕೇರಿಯಿಂದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಘಟನೆಗೆ ಸಂಬಂಧಿಸಿದಂತೆ ಮುಂದಿನ ತನಿಖೆ ನಡೆಯುತ್ತಿದೆ.

error: Content is protected !!