ಸಿಂಧನೂರಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ 7 ಅಂಗಡಿಗಳು

ರಾಯಚೂರು: ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಹೊತ್ತಿಕೊಂಡು ಸಿಂಧನೂರು ಪಟ್ಟಣದ ಕನಕದಾಸ ವೃತ್ತದ ಬಳಿ ಬರುವ 7 ಅಂಗಡಿಗಳು ಸುಟ್ಟು ಕರಕಲಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಸಿಂಧನೂರು ಪಟ್ಟಣದ ಆರನೇ ವಾರ್ಡ್​ನಲ್ಲಿ ಬರುವ ದೆಹಲಿ ಬಜಾರ್, ಮೊಬೈಲ್ ಅಂಗಡಿ, ಬಟ್ಟೆ ಅಂಗಡಿ, ಚಿಕ್ಕನ್ ಶಾಪ್‌, ಜನರಲ್ ಸ್ಟೋರ್, ಹಗ್ಗ ಮಾರಾಟ ಕೇಂದ್ರ ಸೇರಿದಂತೆ ಒಟ್ಟು 7 ಅಂಗಡಿಗಳಿಗೆ ಬೆಂಕಿ ಹತ್ತಿದೆ.

ಘಟನೆ ವಿಚಾರ ತಿಳಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಹಾಸಪಟ್ಟು,‌ ನಸುಕಿನ ಜಾವದವರೆಗೆ ಬೆಂಕಿ ನಂದಿಸಲಾಗಿದೆ.

ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳಿಗೆ ಹಾನಿ‌ ಸಂಭವಿಸಿದೆ. ನಷ್ಟ ಪರಿಹಾರ ನೀಡುವಂತೆ ಅಂಗಡಿ ಮಾಲೀಕರು ಮನವಿ ಮಾಡಿಕೊಂಡಿದ್ದಾರೆ.

error: Content is protected !!