ಪ್ರಾಧ್ಯಪಕರ ಕಿರುಕುಳಕ್ಕೆ ನೊಂದ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ; ಶವಾಗಾರದ ಮುಂದೆ ಸ್ನೇಹಿತರಿಂದ ಪ್ರತಿಭಟನೆ

ಆನೇಕಲ್: ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.

ಯಶಸ್ವಿನಿ (23) ಮೃತ ವಿದ್ಯಾರ್ಥಿನಿ.

ಯಶಸ್ವಿನಿ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್​​ ಕಾಲೇಜಿನಲ್ಲಿ Oral Medicine and Radiology ವಿಭಾಗದಲ್ಲಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದಳು. ಸೆಮಿನಾರ್​​ಗೆ ಅವಕಾಶ ನೀಡದ ಜೊತೆಗೆ ರೇಡಿಯಾಲಜಿ ಕೇಸ್​ ಕೂಡ ನೀಡದೆ ಕಾಲೇಜಿನಲ್ಲಿ ಈಕೆಗೆ ಕಿರುಕುಳ ನೀಡಲಾಗಿದೆ. ಇದರ ನಡುವೆ ಬುಧವಾರ ಕಣ್ಣು ನೋವಿನ ಕಾರಣಕ್ಕೆ ಕಾಲೇಜಿಗೆ ಯಶಸ್ವಿನಿ ಹೋಗಿರಲಿಲ್ಲ. ಮಾರನೇ ದಿನ ಕಾಲೇಜಿಗೆ ಬಂದಾಗ ಕಣ್ಣಿಗೆ ಯಾವ ಡ್ರಾಪ್ಸ್ ಬಳಸಿದೆ? ಎಷ್ಟು ಹನಿ ಡ್ರಾಪ್ಸ್ ಹಾಕಿಕೊಂಡೆ? ಪೂರ್ತಿ ಬಾಟಲ್​ ಹಾಕಿಕೊಂಡ್ಯಾ? ಎಂದೆಲ್ಲ ಕೇಳಿ ಪ್ರಾಧ್ಯಾಪಕರು ಅವಮಾನ ಮಾಡಿದ್ದರು. ಇದರಿಂದ ತೀವ್ರವಾಗಿ ನೊಂದಿದ್ದ ಈಕೆ ಪ್ರಾಣಕಳೆದುಕೊಳ್ಳುವ ನಿರ್ಧಾರ ಮಾಡಿದ್ದಾಳೆ ಎನ್ನಲಾಗಿದೆ.

ಮೃತ ವಿದ್ಯಾರ್ಥಿನಿಯ ಸ್ನೇಹಿತರು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದು, ಯಶಸ್ವಿನಿ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ.

error: Content is protected !!