ಮಣಿಪಾಲ: ರಸ್ತೆ ಮಧ್ಯೆ ಇದ್ದ ಡಿವೈಡರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜ.10ರಂದು ನಸುಕಿನ ಸುಮಾರು 3 ಗಂಟೆ ಸುಮಾರಿಗೆ ಲಕ್ಷ್ಮೀಂದ್ರ ನಗರದ ಸುಧಾ ಫರ್ನಿಚರ್ ಎದುರು, ರಾಷ್ಟ್ರೀಯ ಹೆದ್ದಾರಿ 169ಎನಲ್ಲಿ ನಡೆದಿದೆ. ಮೃತರನ್ನು ಕುಂಜಿಬೆಟ್ಟು ಬುಡ್ನಾರ್ ರಸ್ತೆ ನಿವಾಸಿ ಪ್ರವೀಣ್ ಶೆಟ್ಟಿ (36) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಸಾಗುತ್ತಿದ್ದ ಪ್ರವೀಣ್ ಶೆಟ್ಟಿ ಅವರ ಬೈಕ್ ಅಚಾನಕ್ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇದ್ದ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ಪರಿಣಾಮ ಅವರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೇ, ಸುಮಾರು ಒಂದೂವರೆ ವರ್ಷಗಳ ಹಿಂದೆ ವಿವಾಹವಾಗಿದ್ದ ಪ್ರವೀಣ್ ಶೆಟ್ಟಿ ಅವರ ಅಕಾಲಿಕ ಮರಣ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಆಳವಾದ ಶೋಕವನ್ನುಂಟುಮಾಡಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.