ಭೀಕರ ರಸ್ತೆ ಅಪಘಾತ: ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಸಾ*ವು

ಮಂಗಳೂರು: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪಾಡಿ (24) ಎಂದು ಗುರುತಿಸಲಾಗಿದೆ.

ಜ.5ರಂದು ರಾತ್ರಿ ಮಂಗಳೂರಿನಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ತಮ್ಮ ಸ್ಕೂಟರ್‌ನಲ್ಲಿ ಊರಿಗೆ ಮರಳುತ್ತಿದ್ದ ವೇಳೆ ಮಹಾಝ್ ಅವರ ಸ್ಕೂಟರ್ ಹಾಗೂ ಬೀರಿ ಸಮೀಪ ತಲಪಾಡಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಮಹಾಝ್ ಅವರಿಗೆ ಗಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!