ಜ.17-18ರಂದು ಶಕ್ತಿನಗರದಲ್ಲಿ ಪಿಎಫ್‌ಸಿ ಪರ್ಬ

ಮಂಗಳೂರು: ಪದವು ಫ್ರೆಂಡ್ಸ್ ಕ್ಲಬ್ (ರಿ) ಸ್ವರ್ಣ ಸಂಭ್ರಮ ಸಮಿತಿಯ ವತಿಯಿಂದ ಜನವರಿ 17 ಮತ್ತು 18ರಂದು ಶಕ್ತಿನಗರದ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ PFC ಪರ್ಬ ಆಹಾರ ಮೇಳ, ಪ್ರದರ್ಶನ ಮತ್ತು ಮನರಂಜನಾ ಕಾರ್ಯಕ್ರಮಗಳು ನಡೆಯಲಿದೆ ಎಂದು ಕ್ಲಬ್‌ ಅಧ್ಯಕ್ಷ ಕುಶಾಲ್ ಕುಮಾರ್ ಕೆ ಹೇಳಿದರು.

ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾಹಿತಿ ನೀಡಿದ ಅವರು, ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಶಕ್ತಿನಗರ ಪರಿಸರದಲ್ಲಿ ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದು, ಇದೀಗ ಸ್ವರ್ಣ ಸಂಭ್ರಮದ ಸಡಗರದಲ್ಲಿದೆ ಎಂದು ಅವರು ಹೇಳಿದರು. ಸ್ಥಳೀಯ ಸರಕಾರಿ ಶಾಲೆಗಳ ಅಭಿವೃದ್ಧಿಗೆ ನಿರಂತರ ಸಹಕಾರ ನೀಡುತ್ತಿರುವ ಸಂಸ್ಥೆ, ವಿದ್ಯಾರ್ಥಿಗಳ ಪ್ರತಿಭಾ ಪೋಷಣೆಗೆ ವಿಶೇಷ ಒತ್ತು ನೀಡುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸ್ವರ್ಣ ಸಂಭ್ರಮ ಸಮಿತಿ ಅಧ್ಯಕ್ಷ ಜಾನ್ಸನ್, ಕಾರ್ಯದರ್ಶಿ ರಾಮಕೃಷ್ಣ ಭಟ್, ಉಪಾಧ್ಯಕ್ಷ ದಿನೇಶ್ ಟಿ., ಪ್ರಧಾನ ಕಾರ್ಯದರ್ಶಿ ಪ್ರಸಾದ್ ಟಿ., ಪದವು ಫ್ರೆಂಡ್ಸ್ ಕ್ಲಬ್ ಲೆಕ್ಕ ಪರಿಶೋಧಕ ರವೀಂದ್ರ ರೈ ಹಾಗೂ ಸ್ವರ್ಣ ಸಂಭ್ರಮ ಸಮಿತಿ ಸಂಚಾಲಕ ಹರೀಶ್ ಕುಮಾರ್ ಜೋಗಿ ಉಪಸ್ಥಿತರಿದ್ದರು.

error: Content is protected !!