ಮಂಗಳೂರು: ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕೂಳೂರಿನ ನಿವಾಸಿ ಮೋಹನ (37) ಈ ಪ್ರಕರಣದಲ್ಲಿ ಬಂಧಿತನಾದ ನಾಲ್ಕನೇ ಆರೋಪಿ. ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ್, ಧನುಷ್ ಹಾಗೂ ಲಾಲು ಅಲಿಯಾಸ್ ರತೀಶ್ ಅವರನ್ನು ಪೊಲೀಸರು ಬಂಧಿಸಿದ್ದರು.

ಹಲ್ಲೆಗೆ ಒಳಗಾದ ಕಾರ್ಮಿಕನನ್ನು ದಿಲ್‌ಜಾನ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆರೋಪಿಗಳು ದಿಲ್‌ಜಾನ್ ಅನ್ಸಾರಿಯನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.