ಕೊಲ್ಲಂ: ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಮಹಿಳಾ ಹಾಸ್ಟೆಲ್‌ನಲ್ಲಿ ಗುರುವಾರ ಬೆಳಿಗ್ಗೆ ಇಬ್ಬರು ವಿದ್ಯಾರ್ಥಿನಿಯರು ಶವವಾಗಿ ಪತ್ತೆಯಾಗಿದ್ದಾರೆ. ಮೃತರು ಕೋಝಿಕ್ಕೋಡ್‌ನ 18 ವರ್ಷದ ಸಾಂಡ್ರಾ ಮತ್ತು ತಿರುವನಂತಪುರಂನ 16 ವರ್ಷದ ವೈಷ್ಣವಿ. ವೈಷ್ಣವಿ 10ನೇ ತರಗತಿ ವಿದ್ಯಾರ್ಥಿನಿ ಹಾಗೂ ಸಾಂಡ್ರಾ ಪ್ಲಸ್ ಟು ವಿದ್ಯಾರ್ಥಿನಿ.

ಸ್ಥಳೀಯ ಮಾಹಿತಿಯ ಪ್ರಕಾರ, ಘಟನೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಬೆಳಕಿಗೆ ಬಂದಿದೆ. ಇವರಿಬ್ಬರು ದೈನಂದಿನ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಕಾರಣ ಇತರ ವಿದ್ಯಾರ್ಥಿಗಳು ಕೋಣೆಗೆ ತೆರಳಿದಾಗ ಬಾಗಿಲು ಮುಚ್ಚಿರುವುದನ್ನು ಗಮನಿಸಿದ್ದರು. ಕಿಟಕಿಯ ಮೂಲಕ ಒಳಗೆ ನೋಡಿದಾಗ, ಇಬ್ಬರ ಶವಗಳನ್ನು ಕಂಡು ಅಚ್ಚರಿ ಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಪೋಲೀಸರು ತನಿಖೆ ಆರಂಭಿಸಿದ್ದಾರೆ.

ಸ್ಥಳೀಯ ಮಾಹಿತಿ ಪ್ರಕಾರ, ವೈಷ್ಣವಿ ಕಬಡ್ಡಿ ಆಟಗಾರ್ತಿ, ಕೊತ್ತುವಾತುಕ್ಕಲ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಗೆದ್ದಿದ್ದರು. ಸಾಂಡ್ರಾ ಕೂಡ ಅಥ್ಲೆಟಿಕ್ ವಿಭಾಗದ ಆಟಗಾರ್ತಿ.