
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅದೊಂದು ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮಕರ ಸಂಕ್ರಾಂತಿ ಹಿನ್ನೆಲೆ ಸ್ನಾನಕ್ಕೆ ತೆರಳಿದ್ದ ಬಾಲಕರು ತಂದೆ ಕಣ್ಣೆದುರೇ ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮುಧೋಳ ತಾಲೂಕಿನ ಜಾಲಿಕಟ್ಟೆ ಬಳಿ ಸಂಭವಿಸಿದೆ.

ಮನೋಜ್(17) ಮತ್ತು ಪ್ರಮೋದ್ ಬಡಿಗೇರ(17) ಮೃತ ಬಾಲಕರು.
ಮನೋಜ್ ಮತ್ತು ಪ್ರಮೋದ್ ಪ್ರಥಮ ಪಿಯುಸಿ ಓದುತ್ತಿದ್ದರು. ಮಕರ ಸಂಕ್ರಾಂತಿ ಹಬ್ಬ ಹಿನ್ನೆಲೆ ಕಾಲೇಜಿಗೆ ರಜೆ ಇದ್ದುದರಿಂದ ಕಲ್ಲಿನ ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದಾರೆ. ಆದರೆ ಈ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಮುಳುಗುತ್ತಿದ್ದ ಮತ್ತೋರ್ವ ಬಾಲಕನನ್ನು ಸ್ಥಳೀಯ ವ್ಯಕ್ತಿ ರಕ್ಷಿಸಿದ್ದಾರೆ.
ಇಬ್ಬರು ಬಾಲಕರನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢ ಪಡಿಸಿದ್ದಾರೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.