
ಬೆಂಗಳೂರು: ವಲಸೆ ಕಾರ್ಮಿಕರು ಇರುವ ಮನೆಗೆ ತೆರಳಿ ಅಕ್ರಮವಾಗಿ ನುಗ್ಗಿ ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟು ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಹಿಂದೂ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸ್ ಠಾಣಾ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.


ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು ಎನ್ನಲಾಗಿದೆ. ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಿ ಸರ್ಕಾರಿ ವಿರೋಧಿ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.