
ಭೋಪಾಲ್: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಹಲ್ಲೆ ಮಾಡಿ ಕೊಂದು ಹಾಕಿದ್ದು, ಈ ವೇಳೆ 6 ತಿಂಗಳ ಮಗು ಕೂಡ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನೆಯ ಬೇಡ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಪೊಲೀಸ್ ಮೂಲಗಳ ಪ್ರಕಾರ ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಮನೆಯಲ್ಲಿ ಪತ್ತೆಯಾಗಿತ್ತು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ತಿಳಿಸಿದ್ದಾರೆ.
ಮಹಿಳೆಯ ಪತಿ ಸುನಿಲ್ ಶವಗಳ ಬಳಿ ಕುಳಿತಿರುವುದು ಕಂಡುಬಂದಿದ್ದು, ಅನುಮಾನದ ಮೇಲೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಚಂಪಾಬಾಯಿಯ ದೇಹದ ಮೇಲೆ ಹಲವು ಗಾಯದ ಗುರುತುಗಳು ಕಂಡುಬಂದಿವೆ.