ಪುತ್ತೂರು: ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ(ಜ.18) ಸಂಭವಿಸಿದೆ.

ದೈವಸ್ಥಾನ ಜಾತ್ರಾ ಮಹೋತ್ಸವ ನಡೆಯುತ್ತಿದ್ದಾಗ ದೇವಾಲಯದ ಆವರಣದಲ್ಲಿರುವ ವಿದ್ಯುತ್ ಕಂಬದ ಬಳಿ ಕಾರು ಪಾರ್ಕಿಂಗ್ ಮಾಡಲಾಗಿತ್ತು. ಆ ಸಮಯದಲ್ಲಿ, ಹತ್ತಿರದ ಜಾತ್ರೆಯಿಂದ ಬಂದ ಗ್ಯಾಸ್ ಬಲೂನ್ ಗಾಳಿಯ ರಭಸಕ್ಕೆ ಹಾರಿ ವಿದ್ಯುತ್ ತಂತಿಗೆ ತಗುಲಿ ಈ ದುರ್ಘಟನೆ ನಡೆದಿರುವುದಾಗಿ ವರದಿಯಾಗಿದೆ.


ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆಯಿಂದಾಗಿ ತಕ್ಷಣ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ ಕಾರು ಭಾಗಶಃ ಸುಟ್ಟುಹೋಗಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ.