ಸ್ಲೀಪರ್​ ಕೋಚ್​ ಬಸ್ ಕಂಟೈನರ್ ಟ್ರಕ್​ಗೆ ಡಿಕ್ಕಿ: ಓರ್ವ ಸಾವು, 11 ಮಂದಿಗೆ ಗಾಯ

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್​ ಕಂಟೈನರ್ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ.

ಒರಿಸ್ಸಾ ಮೂಲದ ಸುಹಾಸ್​ ಎಂಬಾತ ಸಾವನ್ನಪ್ಪಿದ್ದು, ಪ್ರೇಮ್ ಕುಮಾರ್ ಮತ್ತು ಮುನಿದ್ ಯಾದವ್ ಇಬ್ಬರಿಗೂ ಗಂಭೀರ ಗಾಯಗಳಾಗಿವೆ.

ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿ ರಭಸಕ್ಕೆ ಬಸ್​ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!