ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆ: ಕಾವೂರು ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ

ಕಾವೂರು: ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ, ಜ.20ರಂದು ಸಂಜೆ 6.00 ಗಂಟೆಗೆ ಕಾವೂರು ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ ನಡೆಯಿತು.

ಕಾವೂರು ಮಂಡಲ ಅಧ್ಯಕ್ಷರಾದ ರಾಜೇಶ್ ಕೊಟ್ಟಾರಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಭಾಗವಹಿಸಿ, ನಿತಿನ್ ನಬಿನ್ ರವರ ಆಯ್ಕೆಯನ್ನು ಅಭಿನಂದಿಸಿದರು. ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವಲ್ಲಿ ಅವರ ನಾಯಕತ್ವ ಮಹತ್ವದ ಪಾತ್ರ ವಹಿಸಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಉಪಾಧ್ಯಕ್ಷರು,
ಮಂಡಲದ ಪ್ರಭಾರಿಗಳಾದ ರವೀಂದ್ರ ಉಳ್ಳಿದೊಟ್ಟು,
ಜಿಲ್ಲೆಯ ಉಪಾಧ್ಯಕ್ಷರಾದ ಕವಿತಾ ಸನಿಲ್,
ಜಿಲ್ಲಾ ಹಾಗೂ ಮಂಡಲದ ಪ್ರಮುಖರು,
ಮಂಡಲ ಪದಾಧಿಕಾರಿಗಳು, ವಿವಿಧ ಜವಾಬ್ದಾರಿಯಲ್ಲಿರುವ ಪ್ರಮುಖರು ಮತ್ತು ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಸಿಹಿ ಹಂಚಿ, ಘೋಷಣೆಗಳನ್ನು ಕೂಗುವ ಮೂಲಕ ಸಂಭ್ರಮ ವ್ಯಕ್ತಪಡಿಸಿದರು.

error: Content is protected !!