ಲಾರಿ, ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು

ಹಾವೇರಿ: ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನಾಲ್ಕರ್ ಕ್ರಾಸ್ ಬಳಿ ನಡೆದಿದೆ.

ಮೃತ ಬೈಕ್ ಸವಾರ ಹೊಂಕಣ ಗ್ರಾಮದ ನಿವಾಸಿ ನಟರಾಜ್ ದಳವಾಯಿ(43) ಎಂದು ಗುರುತಿಸಲಾಗಿದೆ.

ಹಾನಗಲ್ ಕಡೆಯಿಂದ ಹೊಂಕಣ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸದ್ಯ ಪೊಲೀಸರು ಲಾರಿಯನ್ನ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಅಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

error: Content is protected !!