
ಮಂಗಳೂರು: ತನ್ನ ಅಭಿಮಾನಿಗಳನ್ನು ಬೈಯುತ್ತಲೇ ಇನ್ಸ್ಟಾಗ್ರಾಮ್ ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿ ನಿವಾಸಿ ಆಶಾ ಪಂಡಿತ್ ಇಂದು ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು.
ಇನ್ಸ್ಟಾಗ್ರಾಮ್ ನಲ್ಲಿ ಚಿತ್ರ ವಿಚಿತ್ರ ಬೈಗುಳದಿಂದ ಪ್ರಸಿದ್ಧಿ ಪಡೆದಿದ್ದ ಅವರು ಪಡೀಲ್ ಬಳಿ ಪುಟ್ಟ ಗೂಡಂಗಡಿ ಹೊಂದಿದ್ದರು.
ನಿನ್ನೆ ರಾತ್ರಿ ವಾಂತಿ ಮಾಡಿದ್ದು ಇಂದು ನಸುಕಿನ ಜಾವ ಹೃದಯಾಘಾತಕ್ಕೆ ತುತ್ತಾಗಿ ಅಂಗಳದಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟರು ಎಂದು ಕುಟುಂಬ ಮೂಲಗಳು ಹೇಳಿವೆ.