ಕಾರ್ಕಳ : ಖಾಸಗಿ ಬಸ್ ಮತ್ತು ತೂಫಾನ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ಇಂದು(ಜ.23) ಕಾರ್ಕಳದ ಬಜಗೋಳಿ ರಾಷ್ಟ್ರೀಯ ಹೆದ್ದಾರಿಯ ಮಿಯ್ಯಾರಿನಲ್ಲಿ ಸಂಭವಿಸಿದೆ.


ಧರ್ಮಸ್ಥಳದಿಂದ ಕಾರ್ಕಳದೆಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಗುಲ್ಬರ್ಗದಿಂದ ಧರ್ಮಸ್ಥಳದತ್ತ ತೆರಳುತ್ತಿದ್ದ ತೂಫಾನ್ ವಾಹನದ ಮಧ್ಯೆ ಡಿಕ್ಕಿಯಾಗಿದ್ದು ಪರಿಣಾಮವಾಗಿ ಓರ್ವ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಇಬ್ಬರು ಕೊನೆಯುಸಿರೆಳೆದಿದ್ದಾರೆ.


8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.