ಕಬ್ಬು ಲಾರಿಗೆ ಬೈಕ್‌ ಡಿಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ವಿಜಯಪುರ: ಪಟ್ಟಣದಲ್ಲಿ ಕೆಲಸ ಮುಗಿಸಿ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಬ್ಬು ತುಂಬಿದ ಲಾರಿಗೆ ಬೈಕ್‌ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಕ್ರಾಸ್‌ ಬಳಿ ಶುಕ್ರವಾರ(ಜ.23) ರಾತ್ರಿ ನಡೆದಿದೆ.

ಸಾತಿಹಾಳ ಗ್ರಾಮದ ನಿವಾಸಿ ಹಣಮಂತ ಪಾಳ್ಯ(21) ಮೃತ ಸವಾರ.

ಮಾರ್ಕಬ್ಬಿನಹಳ್ಳಿ ಕ್ರಾಸ್‌ ಬಳಿ ಚಲಿಸುತ್ತಿದ್ದ ಕಬ್ಬಿನ ಲಾರಿಗೆ ಹಿಂಬದಿಯಿಂದ ಬೈಕ್‌ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಹಣಮಂತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೇವರಹಿಪ್ಪರಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

error: Content is protected !!